ಜಿಲ್ಲೆ

ಮಹಿಳಾ ನೌಕರರಿಗೆ ಕ್ರೀಡಾ ಸ್ಪರ್ಧೆ 9 ರಂದು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಮಹಿಳಾ ದಿನಾಚರಣೆ ಅಂಗವಾಗಿ ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಮಾರ್ಚ್ 9 ರಂದು ಬೆಳಿಗ್ಗೆ 10ಕ್ಕೆ ಮಹಿಳಾ ಸರ್ಕಾರಿ ನೌಕರರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ತಿಳಿಸಿದ್ದಾರೆ.

ರಂಗೋಲಿ, ಕುರ್ಚಿ ಆಟ, ನಿಂಬೆ-ಚಮಚ ಆಟ, ಹಗ್ಗ ಜಗ್ಗಾಟ ಮತ್ತಿತರ ಸ್ಪರ್ಧೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

ಆಸಕ್ತ ಮಹಿಳಾ ನೌಕರರು ಸಮುದಾಯ ಭವನಕ್ಕೆ ನಿಗದಿತ ಸಮಯಕ್ಕಿಂತ ಮುಂಚೆ ಆಗಮಿಸಿ, ಹೆಸರು ನೋಂದಾಯಿಸಿ ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.