ಜಿಲ್ಲೆ

ಬಜೆಟ್‍ನಲ್ಲಿ ಜಿಲ್ಲೆಗೆ ಹಲವು ಕೊಡುಗೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಬೀದರ್ ದಕ್ಷಿಣ ಘಟಕದ ಪ್ರಚಾರ ಸಮಿತಿಯ ಅಧ್ಯಕ್ಷ ನರಸಪ್ಪ ಯಾಕತಪುರ ಸಂತಸ ವ್ಯಕ್ತಪಡಿಸಿದ್ದಾರೆ.

ಬೀದರ್‍ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭಿಸುವ ಘೋಷಣೆಯಿಂದಾಗಿ ಮಾರಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಲು ಜಿಲ್ಲೆಯ ಜನರಿಗೆ ಸಹಾಯವಾಗಲಿದೆ. ಬಸವಕಲ್ಯಾಣ ವಿಭಾಗೀಯ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ, ಭಾಲ್ಕಿಯ 100 ಹಾಸಿಗೆಗಳ ಆಸ್ಪತ್ರೆಯನ್ನು 150 ಹಾಸಿಗೆಗಳ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದಾಗಿ ಪ್ರಕಟಿಸಿದ್ದು, ರೋಗಿಗಳಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳು ಸಿಗಲಿವೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅವರು ಸರ್ವರ ಹಿತ ಹಾಗೂ ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ. ಇದು, ಜನಪರ ಹಾಗೂ ಮಾದರಿ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.