ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಸತ್ವಹೀನವಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಿರಿಯ ಮುಖಂಡ ರೇವಣಸಿದ್ದ ಜಾಡರ್ ಪ್ರತಿಕ್ರಿಯಿಸಿದ್ದಾರೆ.
ಬೀದರ್ ವಿಶ್ವವಿದ್ಯಾಲಯ ಸೇರಿದಂತೆ ಈ ಹಿಂದೆ ಹೊಸದಾಗಿ ಘೋಷಿಸಿದ ಯಾವ ವಿಶ್ವವಿದ್ಯಾಲಯಕ್ಕೂ ಅನುದಾನ ಪ್ರಕಟಿಸದೆ, ಮಲತಾಯಿ ಧೋರಣೆ ಅನುಸರಿಸಲಾಗಿದೆ. ಇದರಿಂದ ವಿಶ್ವವಿದ್ಯಾಲಯಗಳನ್ನು ಬಲಿಷ್ಠಗೊಳಿಸುವ ಇಚ್ಛಾಶಕ್ತಿ ಸರ್ಕಾರಕ್ಕೆ ಇಲ್ಲದಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ವಿದ್ಯಾನಿಧಿಯ ಸಮರ್ಪಕ ಅನುಷ್ಠಾನ, ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಭರವಸೆ ಭರವಸೆಯಾಗಿಯೇ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.