ಬೀದರ್: ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ಅವರು ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಈಶ್ವರ ಖಂಡ್ರೆ ಅವರು ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಬಿಜೆಪಿಯ ಭದ್ರ ಕೋಟೆಯಾಗಿದ್ದ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ನುರಿತ, ಪ್ರತಿಭಾನ್ವಿತ, ಹಿರಿಯ ರಾಜಕಾರಣಿಯಾಗಿರುವ ಖಂಡ್ರೆ ಅವರಿಗೆ ಮುಖ್ಯಮಂತ್ರಿ ಹೊಣೆ ವಹಿಸಬೇಕು ಎಂದು ಕೋರಿದ್ದಾರೆ.