ಜಿಲ್ಲೆ

ಬ್ಯಾಕ್‍ಲಾಗ್ ಹುದ್ದೆ ಭರ್ತಿ ಬೇಡ

ರೇವಣಸಿದ್ದಪ್ಪ ಪಾಟೀಲ್

ಬೀದರ್: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗುವವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯಾವುದೇ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಬಾರದು ಎಂದು ಮಾದಿಗ ಸಮಾಜದ ಮುಖಂಡರೂ ಆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ನಾಗಮೋಹನ್‍ದಾಸ್ ಏಕ ಸದಸ್ಯ ಸಮಿತಿಯ ಮಧ್ಯಂತರ ವರದಿ ಪಡೆದು ಮಾದಿಗ ಮತ್ತು ಮಾದಿಗ ಸಮುದಾಯದ ಉಪ ಜಾತಿಗಳಿಗೆ ಶೇ 6 ರಷ್ಟು ಒಳ ಮೀಸಲಾತಿ ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.