ಜಿಲ್ಲೆ

ನವೀನ್ ಪಬ್ಲಿಕ್ ಶಾಲೆಯಲ್ಲಿ ಜಯಂತಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಇಲ್ಲಿಯ ಕುಂಬಾರವಾಡ ರಸ್ತೆಯಲ್ಲಿ ಇರುವ ನವೀನ್ ಪಬ್ಲಿಕ್ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಮಾಲೆ ಹಾಕಿ ಗೌರವಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಜ್ಞಾನದ ಗಣಿಯಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ವಿಶ್ವದಲ್ಲೇ ಮಾದರಿ ಸಂವಿಧಾನವಾಗಿದೆ ಎಂದು ಅವರು ಹೇಳಿದರು.

ಆಡಳಿತಾಧಿಕಾರಿ ಗಣೇಶ ಕಾಪಲಾಪುರ, ಪ್ರಾಚಾರ್ಯ ರಾಜಪ್ಪ ಬಿರಾದಾರ, ಶಿಕ್ಷಕಿಯರಾದ ಸುಧಾರಾಣಿ, ಅನುಸೂಯಾ ಉಪಸ್ಥಿತರಿದ್ದರು.

ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.