ಬೀದರ್: ಇಲ್ಲಿಯ ಸಣ್ಣ ನೀರಾವರಿ ಇಲಾಖೆಯ ವಿಭಾಗೀಯ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ಸ್ಥಾಪಿಸಬೇಕು ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಅವರು ಈ ಕುರಿತು ಮುಖ್ಯಮಂತ್ರಿ, ಸಣ್ಣ ನೀರಾವರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಡಾ. ಅಂಬೇಡ್ಕರ್ ಅವರ ಮೂರ್ತಿಗಳು ಇವೆ. ಸಣ್ಣ ನೀರಾವರಿ ಇಲಾಖೆ ಕಚೇರಿಯಲ್ಲಿ ಮೂರ್ತಿ ಸ್ಥಾಪಿಸಲಾಗಿಲ್ಲ. ಹೀಗಾಗಿ ಮೂರ್ತಿ ಸ್ಥಾಪನೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.