ಜಿಲ್ಲೆ

ಇಡಿ ದಾಳಿ ರಾಜಕೀಯ ಪ್ರೇರಿತ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಖ್ಯಸ್ಥರಾಗಿರುವ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಮಾಜಿ ಅಧ್ಯಕ್ಷ ಬಕ್ಕಪ್ಪ ಕೋಟೆ ಟೀಕಿಸಿದ್ದಾರೆ.

ಇಡಿ ದಾಳಿಯು ಡಾ. ಜಿ. ಪರಮೇಶ್ವರ್ ಅವರ ರಾಜಕೀಯ ಬೆಳವಣಿಗೆಗೆ ತಡೆಯೊಡ್ಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ಇಡಿ ದಾಳಿ ನಡೆಸುತ್ತಿದೆ. ಬಿಜೆಪಿಯ ನಾಯಕರ ಮೇಲೆ ಈ ರೀತಿಯ ದಾಳಿ ನಡೆದ ನಿದರ್ಶನಗಳಿಲ್ಲ ಎಂದು ಆಪಾದಿಸಿದ್ದಾರೆ.

ಡಾ. ಜಿ. ಪರಮೇಶ್ವರ್ ದಲಿತ ಸಮುದಾಯದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ತಮ್ಮ ಸ್ವ ಸಾಮಥ್ರ್ಯದಿಂದ ರಾಜಕೀಯದಲ್ಲಿ ಎತ್ತರಕ್ಕೆ ಬೆಳೆದಿದ್ದಾರೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಬೆಳೆಸಿದ್ದಾರೆ. ಅವರ ಸಂಸ್ಥೆಯಲ್ಲಿ  ಎಲ್ಲವೂ ಪಾರದರ್ಶಕವಾಗಿದೆ ಎಂದು ಹೇಳಿದ್ದಾರೆ.

ಪರಮೇಶ್ವರ್ ಅವರಿಗೆ ರಾಜಕೀಯದಲ್ಲಿ ಇನ್ನೂ ಉನ್ನತ ಹುದ್ದೆಗಳು ಒಲಿದು ಬರಲಿವೆ. ಈ ರೀತಿಯ ದಾಳಿಗಳಿಂದ ಅವರನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.