ಜಿಲ್ಲೆ

ಕರವೇ ತಾಲ್ಲೂಕು ಅಧ್ಯಕ್ಷರಾಗಿ ಮಂಜುನಾಥ ಸ್ವಾಮಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕರ್ನಾಟಕ ರಕ್ಷಣಾ ವೇದಿಕೆಯ ಕಮಲನಗರ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಮಂಜುನಾಥ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕೂಡಲೇ ಜವಾಬ್ದಾರಿ ವಹಿಸಿಕೊಂಡು ಗಡಿ ತಾಲ್ಲೂಕಿನಲ್ಲಿ ಸಂಘಟನೆ ಬಲಪಡಿಸಬೇಕು. ಕನ್ನಡದ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.