ಜಿಲ್ಲೆ

ತಾಂದಳೆಗೆ ಛಾಯಾರತ್ನ ಪ್ರಶಸ್ತಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕರ್ನಾಟಕ ಛಾಯಾರತ್ನ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಛಾಯಾಗ್ರಾಹಕ ಗೋಪಿಚಂದ ತಾಂದಳೆ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ರಾಜ್ಯ ಪತ್ರಿಕಾ ಛಾಯಾಚಿತ್ರಕಾರರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ತಾಂದಳೆ ಅವರ ಎರಡು ದಶಕದ ಪತ್ರಿಕಾರಂಗದ ಸೇವೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.