ಜಿಲ್ಲೆ

ಸಿ.ಎ. ಫೌಂಡೇಷನ್ ಕೋರ್ಸ್‍ನಲ್ಲಿ ಸಾಧನೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಪ್ರಸಕ್ತ ಸಾಲಿನ ಸಿ.ಎ. ಫೌಂಡೇಷನ್ ಕೋರ್ಸ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ಇಲ್ಲಿಯ ಸಾಯಿ ಸ್ಫೂರ್ತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ಸಂಗಮನಾಥ ಅವರನ್ನು ಕಾಲೇಜಿನಲ್ಲಿ ಮಂಗಳವಾರ ಸನ್ಮಾನಿಸಲಾಯಿತು.

ಶಾಲು ಹೊದಿಸಿ, ಹೂಮಾಲೆ ಹಾಕಿ ಸತ್ಕರಿಸಿ, ಪ್ರೋತ್ಸಾಹಿಸಲಾಯಿತು. ಸ್ನೇಹಾ ಅವರು ಸಿ.ಎ. ಫೌಂಡೇಷನ್ ಕೋರ್ಸ್ ಪರೀಕ್ಷೆಯಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಚಂದ್ರಶೇಖರ ಬಿರಾದಾರ ಹೇಳಿದರು.

ಗುಣಮಟ್ಟದ ಶಿಕ್ಷಣದ ಕಾರಣ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಪರೀಕ್ಷೆಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಉಪನ್ಯಾಸಕಿ ನೀಲಾ ಮಾತನಾಡಿ, ಕಠಿಣ ಪರಿಶ್ರಮ ವಹಿಸಿದರೆ ಪ್ರತಿಫಲ ಸಿಕ್ಕೇ ಸಿಗುತ್ತದೆ ಎಂದು ಹೇಳಿದರು.

ಉಪನ್ಯಾಸಕಿಯರಾದ ಪ್ರೀತಿ, ಮಾರ್ಗರೇಟ್ ಇದ್ದರು.