ಬೀದರ್: ತಾಲ್ಲೂಕಿನ ಕೊಳಾರ(ಕೆ) ಕೈಗಾರಿಕೆ ಪ್ರದೇಶದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮಹಿಳಾ ಪಾರ್ಕ್ ನಿವೇಶನ ಹಂಚಿಕೆ ಅರ್ಜಿ ಅವಧಿ ವಿಸ್ತರಿಸಬೇಕು ಎಂದು ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಶನಿವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಅರ್ಜಿ ಸಲ್ಲಿಕೆಗೆ ಆಗಸ್ಟ್ 12 ಕೊನೆಯ ದಿನವಾಗಿತ್ತು. ಆದರೆ, ಸಂಬಂಧಿಸಿದ ದಾಖಲಾತಿ ಪಡೆಯಲು ಸಮಯ ಬೇಕಾಗಲಿದೆ. ಹೀಗಾಗಿ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.