ಬೀದರ್: ತುಮಕೂರು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಭಾಲ್ಕಿ ತಾಲ್ಲೂಕಿನ ಡೊಣಗಾಪುರದ ಬಸವರಾಜ ಕನ್ನಾಳೆ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಸನ್ಮಾನಿಸಲಾಯಿತು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಶಾಲು ಹೊದಿಸಿ ಸತ್ಕರಿಸಿದರು. ಕನ್ನಾಳೆ ಅವರು ತುಮಕೂರು ವಿಶ್ವವಿದ್ಯಾಲಯಕ್ಕೆ ನೇಮಕಗೊಂಡಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.
ಬೀದರ್ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಶಿವಶರಣಪ್ಪ ಮಾಳಗೆ, ಸಂಘದ ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಗೆ, ಖಜಾಂಚಿ ದೇವಪ್ಪ ಚಾಂಬೋಳೆ, ಕಾರ್ಯಾಧ್ಯಕ್ಷ ಶಿವರಾಜ ಕಪಲಾಪುರೆ, ಹಿರಿಯ ಉಪಾಧ್ಯಕ್ಷ ಗೌತಮ, ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಪ್ರಮುಖರಾದ ರಾಜಶೇಖರ ಉಪ್ಪಿನ್, ರಾಜು ಸಾಗರ್, ಮನೋಹರ ಕಾಶಿ, ಶ್ರೀಮಂತ ಸಪಾಟೆ, ದಿಲೀಪಕುಮಾರ ಡೊಂಗರಗೆ ಮತ್ತಿತರರು ಇದ್ದರು.