ಜಿಲ್ಲೆ

ನೌಕರರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ 14ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕಲಬುರಗಿಯ ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಸೆ. 14 ರಂದು ಬೆಳಿಗ್ಗೆ 10.30ಕ್ಕೆ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 2025ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಮಾರಂಭ ಉದ್ಘಾಟಿಸಲಿದ್ದಾರೆ. ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿಕಾರಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ತಿಳಿಸಿದ್ದಾರೆ.

ಜಿಲ್ಲೆಯ ಎಸ್‍ಎಸ್‍ಎಲ್‍ಸಿಯ 90 ಹಾಗೂ ದ್ವಿತೀಯ ಪಿಯುಸಿಯ 27 ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳು ಸಭಾಂಗಣಕ್ಕೆ ಆಗಮಿಸಿ, ಬೆಳಿಗ್ಗೆ 9 ರಿಂದ 10.30 ರ ಒಳಗೆ ಕಡ್ಡಾಯವಾಗಿ ಹೆಸರು ನೋಂದಣಿ ಮಾಡಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ನಿಗದಿತ ಅವಧಿಯ ನಂತರ ಹೆಸರು ನೋಂದಣಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.