ಜಿಲ್ಲೆ

ಉಪ್ಪಾರ ನಮೂದಿಸಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಉಪ್ಪಾರ ಸಮಾಜದವರು ಉಪ್ಪಾರ ಎಂದೇ ನಮೂದಿಸಬೇಕು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ಡಾ. ತಾನಾಜಿ ಸಗರ್ ಕೋರಿದ್ದಾರೆ.

ಜಿಲ್ಲೆಯಲ್ಲಿ ಸಮಾಜವನ್ನು ಉಪ್ಪಾರ, ಗೌಂಡಿ ಹಾಗೂ ಸಗರ್ ಎಂದು ಕರೆಯಲಾಗುತ್ತದೆ. ಎಲ್ಲರೂ ಉಪ್ಪಾರ ಎಂದು ಬರೆಸಿದರೆ ಮಾತ್ರ ಸಮಾಜದ ನಿಖರ ಜನಸಂಖ್ಯೆ ಗೊತ್ತಾಗಲಿದೆ. ಇದರಿಂದ ರಾಜ್ಯ ಸರ್ಕಾರದ ವಿವಿಧ ಸೌಲಭ್ಯ ಪಡೆಯಲು, ಸಮಾಜ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಸಗರ್, ಗೌಂಡಿ ಎಂದು ನಮೂದಿಸಿದರೆ ಯಾವುದೇ ಪ್ರಯೋಜನ ಆಗುವುದಿಲ್ಲ. ಸಮಾಜದವರು ಉಪ್ಪಾರ ಎಂದೇ ಬರೆಸಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.