ಬೀದರ್: ಬೀದರ್ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ(ಟಿಎಪಿಸಿಎಂಎಸ್)ದ ನೂತನ ಅಧ್ಯಕ್ಷರಾಗಿ ಚಿಮಕೋಡ್ ಗ್ರಾಮದ ಸೂರ್ಯಕಾಂತ ಬಂಡೆಪ್ಪ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಅಝರ್ ಅಲಿ ಪಟೇಲ್ ಆಯ್ಕೆಯಾಗಿದ್ದಾರೆ.
ಇಲ್ಲಿನ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಆಯ್ಕೆ ಅವಿರೋಧವಾಗಿ ನಡೆಯಿತು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರಕುಮಾರ ಖಂಡ್ರೆ ಅವರ ಬೆಂಬಲಿತ ಅಭ್ಯರ್ಥಿಗಳಾಗಿದ್ದಾರೆ.