ಜಿಲ್ಲೆ

ದಸರಾ ನೃತ್ಯೋತ್ಸವ-ಹಾಸ್ಯೋತ್ಸವ 12ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ನಾಟ್ಯಶ್ರೀ ನೃತ್ಯಾಲಯ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಅ. 12 ರಂದು ಮಧ್ಯಾಹ್ನ 3.30ಕ್ಕೆ ದಸರಾ ನೃತ್ಯೋತ್ಸವ ಹಾಗೂ ಹಾಸ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಭರತ ನಾಟ್ಯ, ಜಾನಪದ ನೃತ್ಯ, ಸಂಗೀತ ಹಾಗೂ ಹಾಸ್ಯವನ್ನು ಒಳಗೊಳ್ಳಲಿದೆ.

ಧಾರವಾಡದ ಚಲನಚಿತ್ರ ನಟ ಅನಂತಕೃಷ್ಣ ದೇಶಪಾಂಡೆ(ಬೇಂದ್ರೆ) ಜ್ಯೋತಿ ಪ್ರಜ್ವಲಿಸಿ, ಬೇಂದ್ರೆ ದರ್ಶನ ಕುರಿತು ಉಪನ್ಯಾಸ ನೀಡುವರು. ಖ್ಯಾತ ಸಾಹಿತಿಯೂ ಆದ ಮೈಸೂರಿನ ಹಾಸ್ಯ ಕಲಾವಿದ ಪ್ರೊ. ಕೃಷ್ಣೇಗೌಡ ಕನ್ನಡವೆಂಬ ಸೊಬಗು ಕುರಿತು ಉಪನ್ಯಾಸ ನೀಡುವರು. ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಡಾ. ಜಗನ್ನಾಥ ಹೆಬ್ಬಾಳೆ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ. ಪೂರ್ಣಿಮಾ ಜಿ, ಸಮಾಜ ಸೇವಕಿ ನೀತಾ ಎಸ್. ಬೆಲ್ದಾಳೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ ಅತಿವಾಳೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಸಹಾಯಕ ಕೃಷಿ ನಿರ್ದೇಶಕಿ ಡಾ.ಆರತಿ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನಾಟ್ಯಶ್ರೀ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ಅಧ್ಯಕ್ಷತೆ ವಹಿಸುವರು.

ಸದಾನಂದ ಜೋಶಿ, ಟಾಟಾ ಎಐಎ ಲೈಫ್ ಇನ್ಶುರೆನ್ಸ್‍ನ ಕೆ. ಕಿರಣಮೂರ್ತಿ ಹಾಗೂ ಭರತ ನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಬಸವರಾಜ ಮೂಲಗೆ, ರಾಘವೇಂದ್ರ ಅಡಿಗ, ದೇವಿದಾಸ ಜೋಶಿ ಹಾಗೂ ಸ್ವರೂಪರಾಣಿ ನಾಗೂರೆ ನಿರೂಪಿಸುವರು ಎಂದು ನಾಟ್ಯಶ್ರೀ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ತಿಳಿಸಿದ್ದಾರೆ.