ಚಿಟಗುಪ್ಪ: ಮನ್ನಾಎಖೇಳ್ಳಿ-ಮೀನಕೇರಾ ಕ್ರಾಸ್ ಹತ್ತಿರ ಅಕ್ರಮವಾಗಿ ಬೈಕ್ನಲ್ಲಿ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿ 20 ಲಕ್ಷ ರೂ. ಮೌಲ್ಯದ 20 ಕೆಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ.
ಬೀದರ್ ಕಡೆಯಿಂದ ಮೀನಕೇರಾ ಕ್ರಾಸ್ ಮಾರ್ಗವಾಗಿ ಬೈಕ್ನಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬೈಕ್, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಎಸ್ಪಿ ಪ್ರದೀಪ್ ಗುಂಟಿ, ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಮಾಡೋಳಪ್ಪ ಪಿ.ಎಸ್. ಮಾರ್ಗದರ್ಶನದಲ್ಲಿ ಪಿಎಸ್ಐ ಮಹೇಂದ್ರಕುಮಾರ ನೇತೃತ್ವದ ತಂಡದ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಮುಬೀನ್, ರಾಜರಡ್ಡಿ, ಸಂಜುರಡ್ಡಿ, ಅಶ್ಫಾಖ್, ಹಣಮಂತ ಎಲ್., ಬಕ್ಕಪ್ಪ ಎ. ಪಾಲ್ಗೊಂಡಿದ್ದರು. ಮನ್ನಾಎಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.