ಬೀದರ್: ಕಾಂಗ್ರೆಸ್ ಬೀದರ್ ದಕ್ಷಿಣ ಯುವ ಘಟಕದ ಕಾರ್ಯದರ್ಶಿಯಾಗಿ ನಾಗಪ್ಪ ಕುರಿಕಾಯಿನೋರ್ ಅವರನ್ನು ನೇಮಕ ಮಾಡಲಾಗಿದೆ.
ಬೀದರ್ ದಕ್ಷಿಣ ಯುವ ಘಟಕದ ಅಧ್ಯಕ್ಷ ಇಮ್ರಾನ್ ಖಾನ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಘೋಡಂಪಳ್ಳಿ ಗ್ರಾಮದ ನಾಗಪ್ಪ ಅವರು ಒಂದು ದಶಕದಿಂದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅನೇಕ ಹೋರಾಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
ನೇಮಕಾತಿ ಪತ್ರ ವಿತರಣೆ: ಬೀದರ್‍ನಲ್ಲಿ ನಾಗಪ್ಪ ಕುರಿಕಾಯಿನೋರ್ ಅವರಿಗೆ ನೇಮಕಾತಿ ಪತ್ರ ವಿತರಿಸಲಾಯಿತು. ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ವಿಶಾಲ್ ಪಾಟೀಲ, ಬೀದರ್ ದಕ್ಷಿಣ ಘಟಕದ ಉಪಾಧ್ಯಕ್ಷ ಗೋಪಾಲ್ ದೊಡ್ಡಿ, ಪ್ರಧಾನ ಕಾರ್ಯದರ್ಶಿ ರಾಹುಲ್, ಮುಖಂಡ ಶಿವಕುಮಾರ ಶಹಾಪುರೆ ಇದ್ದರು.