ಜಿಲ್ಲೆ

ಚುನಾವಣೆ ಸಂಯೋಜಕರಾಗಿ ಜಾನಸನ್ ಘೋಡೆ ನೇಮಕ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಬಿಹಾರದ ಕುಚಯಕೋಟ್ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂಯೋಜಕರಾಗಿ ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಅವರನ್ನು ನೇಮಕ ಮಾಡಲಾಗಿದೆ.

ಕಿಸಾನ್ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ಅಖಿಲೇಶ್ ಶುಕ್ಲಾ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜಾನಸನ್ ಘೋಡೆ ವಿವಿಧ ಚುನಾವಣೆಗಳಲ್ಲಿ ಪಕ್ಷದ ಪರ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ.