ಜಿಲ್ಲೆ

ವೀರಶೈವ ಲಿಂಗಾಯತ ನಿಗಮಕ್ಕೆ ರಾಜಕುಮಾರ ತರಿ ನೇಮಕ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಚಿಟಗುಪ್ಪ ತಾಲ್ಲೂಕಿನ ಮೀನಕೇರಾದ ರಾಜಕುಮಾರ ತರಿ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ 1 ಆರ್. ಲತಾ ಮುಂದಿನ ಆದೇಶದ ವರೆಗೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

47 ವರ್ಷದ ರಾಜಕುಮಾರ ತರಿ ಒಂದೂವರೆ ದಶಕದಿಂದ ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿದ್ದಾರೆ.