ಬೀದರ್: ಚಂದೂರ ಮೈಸಮ್ಮ ಸಾಮಾಜಿಕ, ಸಾಂಸ್ಕೃತಿಕ ಮತ್ತು ಕಲಾ ಚಾರಿಟೇಬಲ್ ಟ್ರಸ್ಟ್ ಹಾಗೂ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಕನ್ನಡ ರಾಜೋತ್ಸವ ಹಾಗೂ ಬೀದರ್ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮ ಶನಿವಾರ ಸಂಜೆ 7ಕ್ಕೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಹತ್ತಿರ ಆಯೋಜಿಸಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಉಮೇಶ ಸ್ವಾರಳ್ಳಿಕರ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಜ್ಞಾನ ಸಾಗರ ಭಂತೆ, ರಶೀದ್ ಮುತ್ಯಾ ಸಾನ್ನಿಧ್ಯ ವಹಿಸುವರು. ಪೌರಾಡಳಿ ಸಚಿವ ರಹೀಮ್ಖಾನ್, ಸಂಸದ ಸಾಗರ್ ಖಂಡ್ರೆ ಸೇರಿದಂತೆ ಜನಪ್ರತಿನಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.