ಜಿಲ್ಲೆ

ಲೋಕಾ ಬಲೆಗೆ ಗ್ರಾಪಂ ಪಿಡಿಒ

ರೇವಣಸಿದ್ದಪ್ಪ ಪಾಟೀಲ್

ಔರಾದ್: ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು 12 ಸಾವಿರ ರೂ. ಲಂಚ ಪಡೆಯುತ್ತಿದ್ದ ಧೂಪತಮಹಾಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿತಾ ರಾಠೋಡ್ ಬುಧವಾರ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಪಂಚಾಯಿತಿ ವ್ಯಾಪ್ತಿಯ ಜೀರ್ಗಾ(ಬಿ) ಗ್ರಾಮದ ರಾಜಕುಮಾರ ಪಾಟೀಲ್ ಎಂಬುವರ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು ಅನಿತಾ 12 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ರಾಜಕುಮಾರ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪತಿ ದಯಾನಂದ ಜತೆ ಪಿಡಿಒ ಅನಿತಾ ರಾಠೋಡ್ ಗ್ರಾಪಂ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾವ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.