ಎರ್ಮಾಳು ತೆಂಕ ಕಿನಾರಾ ಶಾಲೆಯಲ್ಲಿ ಉಡುಪಿ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟವನ್ನು ಲಿಂಗಪ್ಪಪುತ್ರನ್ ಉದ್ಘಾಟಿಸಿದರು 
ಜಿಲ್ಲೆ

ಉಡುಪಿ ವಲಯ ಮಟ್ಟದ ಕುಸ್ತಿ ಟೂರ್ನಿ

ಇಂದಿರಾ ಎನ್ ಕೆ

ಪಡುಬಿದ್ರಿ: ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎರ್ಮಾಳು ತೆಂಕ ಕಿನಾರಾ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ಕಿನಾರಾ ಶಾಲೆಯಲ್ಲಿ ಬುಧವಾರ ಉಡುಪಿ ವಲಯ ಮಟ್ಟದ ಕುಸ್ತಿ ಟೂರ್ನಿ ನಡೆಯಿತು.

ಎರ್ಮಾಳು ತೆಂಕ ಮೊಗವೀರ ಸಭಾ ಅಧ್ಯಕ್ಷ ಲಿಂಗಪ್ಪಪುತ್ರನ್ ಉದ್ಘಾಟಿಸಿದರು. ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಅಧ್ಯಕ್ಷ ಕಿಶೋರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಂಘ ಅಧ್ಯಕ್ಷ ಸತೀಶ್ ಸಾಲ್ಯಾನ್, ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಪ್ರಭಾಕರ್ ಪುತ್ರನ್, ಪಡುಬಿದ್ರಿ ಪೊಲೀಸ್ ಠಾಣೆ ಅಧಿಕಾರಿಗಳಾದ ರಾಜೇಶ್ ಕೆ., ಶರಣ್, ಯೋಗೀಶ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ತಾಲೂಕು ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಪ್ರೀತಿ ಸುವರ್ಣ ಸ್ವಾಗತಿಸಿದರು. ಶಿಕ್ಷಕಿ ಭವ್ಯಾ, ವಿದ್ಯಾರ್ಥಿ ಅಪ್ಪಾಜಿ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು. ಕವಿತಾ ವಂದಿಸಿದರು.