ಜಿಲ್ಲಾಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟವನ್ನು ಭಾರತ ಕ್ರಿಕೆಟ್ (ಕಿವುಡರ) ತಂಡದ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಹುಂಚನಿ ಉದ್ಘಾಟಿಸಿದರು 
ಜಿಲ್ಲೆ

ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಅಗತ್ಯ

ಇಂದಿರಾ ಎನ್ ಕೆ

ಕುಂದಾಪುರ: ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸಬೇಕು ಎನ್ನುವ ಉದ್ದೇಶದಿಂದ ಶಿಕ್ಷಣ ಇಲಾಖೆ ಜತೆಗೂಡಿ ನಿರಂತರವಾಗಿ ಕ್ರೀಡಾಕೂಟ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಇದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಲು ಸಹಕಾರಿಯಾಗಿದೆ ಎಂದು ಜನತಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರ ಹೇಳಿದರು.

ಹೆಮ್ಮಾಡಿ ಜನತಾ ಕ್ರೀಡಾಂಗಣದಲ್ಲಿ ಶನಿವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಆಶ್ರಯದಲ್ಲಿ ಜಿಲ್ಲಾಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಮಾತನಾಡಿದರು.

ಭಾರತ ಕ್ರಿಕೆಟ್ (ಕಿವುಡರ) ತಂಡದ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚನಿ ಪಂದ್ಯಾಟ ಉದ್ಘಾಟಿಸಿದರು. ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುಕೇಶ ಶೆಟ್ಟಿ, ತಾಲೂಕು ಸಂಯೋಜಕ ರಾಮ ಶೆಟ್ಟಿ, ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷ ರಾಘವೇಂದ್ರ ಕುಲಾಲ್, ಜನತಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಂಜು ಕಾಳಾವರ, ಜನತಾ ಪದವಿ ಪೂರ್ವ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು. ಉಪನ್ಯಾಸಕರಾದ ಉಮೇಶ ನಾಯ್ಕ ಸ್ವಾಗತಿಸಿ, ಪ್ರಿಯಾಂಕ ಕಾರ್ಯಕ್ರಮ ನಿರೂಪಿಸಿದರು. ಅಭಿಜಿತ್ ವಂದಿಸಿದರು.