ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಯಾದಗಿರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸುವರು.
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಹಾಗೂ ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು.
ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು.ರಾಯಚೂರು ಲೋಕಸಭಾ ಸದಸ್ಯರು ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ತು ಸದಸ್ಯರು ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಸಭೆ ಅಧ್ಯಕ್ಷರು ಲಲಿತಾ ಅನಪೂರ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ವಿನಾಯಕ ಮಾಲಿ ಪಾಟೀಲ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಯಾದಗಿರಿ ಕ.ರಾ.ಸ.ನೌ.ಸಂ. ಜಿಲ್ಲಾಧ್ಯಕ್ಷರು ರಾಯಪ್ಪಗೌಡ ಹುಡೇದ, ಯಾದಗಿರಿ ಕ.ರಾ.ಪ್ರೌ.ಶಾ.ಸ.ಶಿ.ಸಂಘ ಅಧ್ಯಕ್ಷರು ಅಶೋಕ ಕುಮಾರ ಕೆಂಭಾವಿ, ಯಾದಗಿರಿ ಕ.ರಾ.ಪ್ರಾ.ಶಾ.ಶಿ.ಸಂಘ ಅಧ್ಯಕ್ಷರು ರಾಘವೇಂದ್ರ ಅಳ್ಳೋಳ್ಳಿ, ಯಾದಗಿರಿ ದೈಹಿಕ ಶಿಕ್ಷಕರ ಸಂಘ ಅಧ್ಯಕ್ಷರು ಹಣಮಂತ ಹೊಸಮನಿ, ಯಾದಗಿರಿ ಕ.ರಾ.ಪ.ಪ್ರಾ.ಶಾ.ಶಿ.ಸಂಘ ಅಧ್ಯಕ್ಷರು ಮಲ್ಲಯ್ಯ ಸಂಜೀವಿನಿ, ಯಾದಗಿರಿ ಲಿಪಿಕ ನೌಕರ ಸಂಘ ಅಧ್ಯಕ್ಷರು ಆದೆಪ್ಪ ಬಾಗ್ಲಿ ಅತಿಥಿಗಳಾಗಿ ಆಗಮಿಸುವರು.
ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು, ಯಾದಗಿರಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಎಲ್ಲಾ ವೃಂದದ ಸಂಘಗಳು, ಸಮಸ್ತ ಗುರುವೃಂದ, ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸರ್ವರೂ ಆಗಮಿಸುವಂತೆ ಯಾದಗಿರಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು (ಆಡಳಿತ) ಚನ್ನಬಸಪ್ಪ ಮುಧೋಳ, ಯಾದಗಿರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪ ನಿರ್ದೇಶಕರು (ಅಭಿವೃದ್ಧಿ) ವೃಷಭೇಂದ್ರಯ್ಯ ಜಿ.ಎಂ, ಯಾದಗಿರಿ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಚಿತ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.