ಯಾದಗಿರಿಯಲ್ಲಿ ಮಂಗಳವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಹುಲ್​ ಪಾಂಡ್ವೆ ಮಾತನಾಡಿದರು. ಎಸ್​ಪಿ ಪೃಥ್ವಿಕ್​ ಶಂಕರ್​ ಇತರರಿದ್ದರು. 
ಯಾದಗಿರಿ

ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ

ಯಾದಗಿರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ.2ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ಹಾಗೂ ಅ.4ರಂದು ನಡೆಯುವ ಗ್ರಾಮಾಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಯುವಂತೆ ಜಿಲ್ಲಾಧಿಕಾರಿ ರಾಹುಲ್​ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಪಂ ಕಚೇರಿಯಲ್ಲಿ ಮಂಗಳವಾರ ಈ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಪರೀಕ್ಷೆಗಳ ವೇಳೆ ಯಾವುದೇ ಲೋಪಗಳಿಗೆ ಅವಕಾಶ ನೀಡದೆ ವ್ಯವಸ್ಥಿತ, ಶಿಸ್ತುಬದ್ಧ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

ಬೆಳಗ್ಗೆ ಹಾಗೂ ಮಧ್ಯಾಹ್ನದ ಎರಡು ಅವಧಿಗಳಲ್ಲಿ ಈ ಪರೀಕ್ಷೆ ನಡೆಯುವುದರಿಂದ ಸಮಯ ಪರಿಪಾಲನೆಯೊಂದಿಗೆ ಪರೀಕ್ಷೆ ನಡೆಸಬೇಕು. ಜಿಲ್ಲೆಯಲ್ಲಿ ಭೂಮಾಪಕರ ಹುದ್ದೆಗಳಿಗೆ 5 ಪರೀಾ ಕೇಂದ್ರಳನ್ನು ಸ್ಥಾಪಸಿದ್ದು, 2259 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಂತೆ ಗ್ರಾಮಾಡಳಿತ ಅಧಿಕಾರಿ ಹುದ್ದೆಗಳಿಗೆ 25 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, 9104 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಾರಣ ಪರೀಕ್ಷೆ ಕೇಂದ್ರಗಳ ಪರೀಕ್ಷೆ ಮೇಲ್ವಿಚಾರಕರು, ಉಪಮುಖ್ಯ ಅಧೀಕರು ಮತ್ತು ಪ್ರಶ್ನೆ ಪತ್ರಿಕೆ ನಿರ್ವಹಿಸುವವರು ಯಾವುದೇ ಲೋಪಕ್ಕೆ ಅವಕಾಶ ನೀಡದೆ, ವ್ಯವಸ್ಥಿತ ರೀತಿಯಲ್ಲಿ ನಿಭಾಯಿಸಬೇಕು. ಗೌಪ್ಯ ಸಾಮಗ್ರಿಗಳನ್ನು ನೀಡುವಾಗ ಹಾಗೂ ಪಡೆಯುವಾಗ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಆಸನಗಳ ವ್ಯವಸ್ಥೆ ಸರಿಯಾಗಿರಬೇಕು. ಸಿಸಿಟಿವಿ ಕಾರ್ಯನಿರ್ವಹಿಸುತ್ತಿರಬೇಕು ಎಂದು ತಾಕೀತು ಮಾಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುದೀಪ್​ ಮಾತನಾಡಿ, ಓಎಂಆರ್​ ಉತ್ತರ ಪತ್ರಿಕೆ ಹಾಗೂ ಪ್ರಶ್ನೆ ಪತ್ರಿಕೆ ನಿರ್ವಹಣೆ, ಅಭ್ಯರ್ಥಿಗಳ ಪ್ರವೇಶ ಪತ್ರ ಪರಿಶೀಲಿಸಲು ಮೇಲ್ವಿಚಾರಕರಿಗೆ ತಿಳಿಸಲಾಗಿದೆ. ಪರೀಕ್ಷೆಯಲ್ಲಿ ಆಹಾರ ಪದಾರ್ಥ, ನೀರಿನ ಬಾಟಲ್​ ಮತ್ತು ಶೂಗಳಿಗೆ ನಿಷೇಧವಿದೆ ಎಂದರು.

ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್​ ಸ್ಕಾನ್​ ಮೂಲಕ ಪಡೆಯುವ ವ್ಯವಸ್ಥೆ ರೂಪಿಸಿದೆ. ವಸ ಸಂಹಿತೆ ಪಾಲಿಸಲು ತಿಳಿಸಿದೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆಯ ರಹಸ್ಯ ಬಂಡಲ್​ ಸಾಗಿಸಲು ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಜಾಮರ್ಸ್​ ಅಳವಡಿಕೆ ಸೇರಿ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಇದ್ದರು.

200 ಮೀಟರ್​ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾ​ಜ್ಞೆ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್​ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಕೊಠಡಿ ಮೇಲ್ವಿಚಾರಕರು ಎಲ್ಲ ಮಾರ್ಗಸೂಚಿ ಅರಿತು, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆ ಗಳಲ್ಲಿ ಕೈಗಡಿಯಾರ, ಕ್ಯಾಲ್ಕುಲೇಟರ್​, ಬ್ಲುಟೂಥ್​ ಡಿವೈಸ್​, ಮೋಬೈಲ್​, ಪೆನ್​ಡೆವ್​, ಇಯರ್​ ಫೋನ್​, ಮೈಕ್ರೋಫೋನ್​ ಸಾಧನ ಬಳಕೆಗೆ ನಿಷೇಧವಿದ್ದು, ಈ ಕುರಿತು ತೀವ್ರ ನಿಗಾ ಇರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇತ್ತೀಚೆಗೆ ಪೋಲಿಸ್​ ಇಲಾಖೆ ಪಿಸಿ ನೇಮಕಾತಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಿರುವುದಕ್ಕೆ ಅವರು ಅಭಿನಂದನೆ ಸಲ್ಲಿಸಿ, ಈ ಪರೀಕ್ಷೆ ಯೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ತಾಕೀತು ಮಾಡಿದರು.

ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲೂ ಸೂಕ್ತ ಪೋಲಿಸ್​ ಬಂದೋಬಸ್ತ್​ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಸಿಸಿಟಿವಿ ಸುಸ್ಥಿತಿಯಲ್ಲಿರುವ ಬಗ್ಗೆ ಮುಂಚಿತವಾಗಿ ಖಾತ್ರಿಪಡಿಸಿಕೊಳ್ಳಬೇಕು. ನಿಯಮ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು.
> ಪೃಥ್ವಿಕ್​ ಶಂಕರ್​ ಎಸ್​ಪಿ ಯಾದಗಿರಿ