ಯಾದಗಿರಿ (ಕೆಂಭಾವಿ): ಬುದ್ದಿಮಾಂದ್ಯ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಆಕೆಯ ಅಜ್ಜನೆ ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಶರಣಪ್ಪ ಟಣಕೆದಾರ (೬೫)ಅತ್ಯಾಚಾರವೆಸಗಿದ ಕಾಮುಕ ಅಜ್ಜ. ಬಾಲಕಿಯ ತಂದೆ-ತಾಯಿ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ತೆರಳಿ ಅಲ್ಲಿ ಕೆಲಸ ಮಾಡಿಕೊಂಡು ನೆಲೆಸಿದ್ದಾರೆ. ಗ್ರಾಮದ ಮನೆಯಲ್ಲಿ ಅಜ್ಜಿ ಮತ್ತು ಅಜ್ಜನ ಜತೆ ಬಾಲಕಿ ವಾಸವಿದ್ದಳು. ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದಿದ್ದಾನೆ. ಅಲ್ಲದೇ ಬಾಯಿಗೆ ಬಟ್ಟೆ ತುರುಕಿ ಕೊಲೆಗೆ ಯತ್ನಿಸಿದ್ದು, ಬಾಲಕಿಯ ಚೀರಾಟ ಕೇಳಿದ ನೆರೆ-ಹೊರೆಯವರು ಓಡಿ ಬಂದು ಬಾಲಕಿಯನ್ನು ರಕ್ಷಣೆ ಮಾಡಿ ಬೆಂಗಳೂರಿನಲ್ಲಿರುವ ತಾಯಿಗೆ ವಿಷಯ ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನಂತೆ ಕೆಂಭಾವಿ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಮತ್ತು ಕೊಲೆಗೆ ಯತ್ನ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಅಮೋಜ ಕಾಂಬಳೆ ಮತ್ತು ಸಿಬ್ಬಂದಿ ಕೃತ್ಯ ಎಸಗಿದಾತನನ್ನು ಬಂಽಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಾಲಕಿಗೆ ಬಾಲ ಮಂದಿರದಲ್ಲಿ ಇರಿಸಿ ಸೂಕ್ತ ಚಿಕಿತ್ಸೆ ಹಾಗೂ ನೆರವು ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲ ತಿಳಿಸಿವೆ.