ಯಾದಗಿರಿ

ವಿಧಾನಸೌಧದ ಮೆಟ್ಟಿಲು ಮೇಲೆ ಉರ್ದು ಹಬ್ಬ ಬೇಡ

ಕರವೇ ಜಿಲ್ಲಾಧ್ಯಕ್ಷ ಭೀಮುನಾಯಕ ಆಗ್ರಹ

ಯಾದಗಿರಿ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಸರ್ಕಾರ ಉರ್ದು ಹಬ್ಬ ಆಯೋಜಿಸುವ ನಿರ್ಧಾರ ಇದೊಂದು ಅವಿವೇಕದ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ ನಡೆಯುತ್ತದೆ ಎಂಬ ಅಽಕ ಪ್ರಸಂಗದ ನಿಲುವುವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮು ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮ ಮಾಡಲು ನಿಮಗೆ ಬೇರೆಲ್ಲೂ ಜಾಗ ಸಿಗಲಿಲ್ಲವೇ, ಸರ್ಕಾರವೇ ಮುಂದೆ ನಿಂತು ಸಮಾಜದ ಸ್ವಾಸ್ತ್ಯ ಹಾಳು ಮಾಡಲು ನಿಂತಂತೆ ಕಾಣುತ್ತಿದೆ. ಈ ಕಾರ್ಯಕ್ರಮ ನಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬದ ತಲೆಹರಟೆ ನಿರ್ಧಾರ ಎಲ್ಲಿಂದ ಬಂತು ? ಯಾರು ಕೇಳಿದ್ದರು ? ಸ್ಪಷ್ಟವಾಗಿ ಹೇಳುವುದಾದರೆ ಕನ್ನಡಿಗರ ಮೇಲೆ ಉರ್ದು ಭಾಷಿಕರನ್ನು, ಉರ್ದು ಭಾಷಿಕರ ಮೇಲೆ ಕನ್ನಡಿಗರನ್ನು ಎತ್ತಿಕಟ್ಟುವ ಹುನ್ನಾರ ಇದಾಗಿದೆ. ಹಿಂದೆ ಉರ್ದು ವಾರ್ತೆ ಸಂಬAಧ ನಡೆದ ಕೋಮುಗಲಭೆ ಸರ್ಕಾರ ಮರೆತಿದೆಯೇ? ಎಂದು ಎಂದು ಅವರು ಗುಡುಗಿದ್ದಾರೆ. ಹಾಗೊಂದು ವೇಳೆ ಈ ಕಾರ್ಯಕ್ರಮ ಮಾಡಿದರೆ ಬೇರೆ ಎಲ್ಲ ಭಾಷೆಗಳ ಹಬ್ಬಗಳ ಸಹ ಅಲ್ಲಿಯೇ ಮಾಡಲು ಮುಂದಾಗುವ ಜನರಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ಅವರು ಮಧ್ಯ ಪ್ರವೇಶಿಸಿ ಕೂಡಲೇ ಇದನ್ನು ರದ್ದು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.