ಜಿಲ್ಲೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ಗೆ 1.25 ಕೋಟಿ ರೂ.ದೇಣಿಗೆ

Mangaluru - Hariprasad Rai



ಮಂಗಳೂರು : ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಭಕ್ತರಾದ ಅಮೆರಿಕದ ಉದ್ಯಮಿ ಶಾರದಾ ಪ್ರಸಾದ್ -ನಳಿನಿ ಪ್ರಸಾದ್ ದಂಪತಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ಗೆ 1.25 ಕೋಟಿ ರೂ.ದೇಣಿಗೆ ನೀಡಿದ್ದಾರೆ. ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ,
ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ಗೃಹಪ್ರವೇಶಕ್ಕೆ ಆಗಮಿಸಿದ ದಂಪತಿ ದೇಣಿಗೆ ಹಸ್ತಾಂತರಿಸಿದರು.
ಪಾವಂಜೆ ಮೇಳದ ಶ್ರೀ ದೇವಿಮಹಾತ್ಮೆ ಯಕ್ಷಗಾನದ ಸಂದರ್ಭ ಶಾರದಾ ಪ್ರಸಾದ್ -ನಳಿನಿ ಪ್ರಸಾದ್ ದಂಪತಿಯನ್ನು ಸನ್ಮಾನಿಸಲಾಯಿತು. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ , ಪಟ್ಲ ಫೌಂಡೇಶನ್
ಟ್ರಸ್ಟ್‌ನ ಪದಾಧಿಕಾರಿಗಳಾದ ಪಟ್ಲಗುತ್ತು ಮಹಾಬಲ ಶೆಟ್ಟಿ, ಸಿಎ ಸುದೇಶ್ ಕುಮಾರ್ ರೈ, ಸಿಎ ದಿವಾಕರ ರಾವ್, ಡಾ. ಸತೀಶ್ ಭಂಡಾರಿ, ಪ್ರದೀಪ್ ಆಳ್ವ ಕದ್ರಿ, ಉದ್ಯಮಿ ಲಕ್ಷ್ಮೀಶ ಭಂಡಾರಿ ಉಪಸ್ಥಿತರಿದ್ದರು.