ಬೆಂಗಳೂರು: ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
“ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರ ನಿಧನದಿಂದ ಅತೀವ ಬೇಸರವಾಗಿದೆ. ಅವರ ಅಗಲಿಕೆ ಕರ್ನಾಟಕದ ಕಲೆ ಹಾಗೂ ಸಾಂಸ್ಕೃತಿಕ ರಂಗಕ್ಕೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿ ಟ್ವಿಟ್ ಮಾಡಿದ್ದಾರೆ. ಇದನ್ನು ಓದಿ: ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ
ಅಂಬಾತನಯ ಮುದ್ರಾಡಿ ಅವರು ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ. ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆ ಮಾಡಿದ್ದ ಸಾಹಿತಿ, ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ.