ಯಲಬುರ್ಗಾದಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನ ಕಾರ್ಯಕ್ರಮದಲ್ಲಿ ಪೌರ ನೌಕರರನ್ನು ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಬೇಲೇರಿ, ಮುಖ್ಯಾಧಿಕಾರಿ ನಾಗೇಶ ಇದ್ದರು. 
ಜಿಲ್ಲೆ

ಸಮಸ್ಯೆಗಳಿಗೆ ಸ್ಪಂದಿಸಲಿ

ಯಲಬುರ್ಗಾ: ಪಟ್ಟಣ ಸ್ವಚ್ಛಗೊಳಿಸುವ ಜತೆಗೆ ನಿವಾಸಿಗಳ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆ ಅಗಾದ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

ಪಟ್ಟಣದ ಪಪಂ ಆವರಣದಲ್ಲಿ ಪೌರಸೇವಾ ನೌಕರರ ಸೇವಾ ಸಂಘದ ತಾಲೂಕು ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿ ವಾರ್ಡ್‌ಗಳಿಗೆ ತೆರಳಿ ಕಸ ಸ್ವಚ್ಛಗೊಳಿಸುವ ಕಾರ್ಯ ಶ್ಲಾಘನೀಯ. ಪೌರ ಕಾರ್ಮಿಕರು ಸ್ವಚ್ಛತೆ ಕಾಪಾಡುವ ಜತೆಗೆ ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ಇವರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ಪಟ್ಟಣದ ಸ್ವಚ್ಛತೆಗಾಗಿ ಒಳಚರಂಡಿ ಮತ್ತು ತುಂಗಭದ್ರಾ ನದಿಯಿಂದ ನೀರು ಪೂರೈಕೆ ಯೋಜನೆ ಶಾಸಕ ರಾಯರಡ್ಡಿ ತಂದಿದ್ದಾರೆ ಎಂದು ತಿಳಿಸಿದರು.

ಪಪಂ ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಪೌರ ಕಾರ್ಮಿಕರ ಹಿತಕ್ಕಾಗಿ ಕೆಲಸ ಮಾಡಲಾಗುತ್ತಿದೆ. ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ನೇಮಕ ಮಾಡುವ ಬಗ್ಗೆ ಡಿಸಿಗೆ ಮನವಿ ಮಾಡಲಾಗಿದೆ ಎಂದರು.

ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಸಿದ್ರಾಮೇಶ ಬೇಲೇರಿ, ಸದಸ್ಯರಾದ ಅಮರೇಶ ಹುಬ್ಬಳ್ಳಿ, ರೇವಣಪ್ಪ ಹಿರೇಕುರುಬರ್ ಮಾತನಾಡಿದರು. ಇದೇ ವೇಳೆ ಪೌರ ಕಾರ್ಮಿಕರು, ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು.

ಪೌರಸೇವಾ ನೌಕರರ ಸಂಘದ ಸ್ಥಳೀಯ ಅಧ್ಯಕ್ಷ ಹನುಮಂತಪ್ಪ ಛಲವಾದಿ, ಪಪಂ ಸದಸ್ಯರಾದ ಕಳಕಪ್ಪ ತಳವಾರ್, ರಿಯಾಜ್‌ಅಹ್ಮದ್ ಖಾಜಿ, ಬಸಲಿಂಗಪ್ಪ ಕೊತ್ತಲ್, ಹನುಮಂತ ಭಜಂತ್ರಿ, ಶರಣಮ್ಮ ಪೂಜಾರ, ಚಂದ್ರಶೇಖರ ಓಜನಹಳ್ಳಿ, ಆಶ್ರಯ ಸಮಿತಿ ಸದಸ್ಯರಾದ ಇಕ್ಬಾಲ್‌ಸಾಬ್ ವಣಗೇರಿ, ಸಿದ್ದಪ್ಪ ಕಟ್ಟಿಮನಿ, ಇಂಜಿನಿಯರ್ ಉಮೇಶ ಬೇಲಿ, ಸಿಬ್ಬಂದಿ ಶಿವಕುಮಾರ ಸರಗಣಾಚಾರ, ರವಿ ಎಕ್ಲಾಸಪುರ, ಯಂಕಣ್ಣ ಜೋಶಿ, ನಾರಾಯಣ ಗಂಗಾಖೇಡ, ರಮೇಶ ಬೇಲೇರಿ, ಸುಭಾಷ್ ಭಾವಿಮನಿ, ಚನ್ನಯ್ಯ ಸಂಕಿನಮಠ, ಕನಕಪ್ಪ ನಾಯಕ, ಸುಮಾ ಕಂಚಿ, ರವಿ ಪೋತೆದಾರ ಇದ್ದರು.