ಕೃಷ್ಣಾ ಬಿಸ್ಕೀಂನ ಕೆರೆ ತುಂಬಿಸುವ ಯೋಜನೆಯಡಿ ಯಲಬುರ್ಗಾ ತಾಲೂಕಿನ ಮುರಡಿ ಕೆರೆ ತುಂಬಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಗಂಗಾಪೂಜೆ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ರಾಯರಡ್ಡಿ ಪಾಲ್ಗೊಂಡಿದ್ದರು. ಗ್ರಾಪಂ ಅಧ್ಯಕ್ಷ ಯಮನಪ್ಪ ಮಾಳಿ, ಕೆಬಿಜೆಎನ್‌ಎಲ್ ಎಇಇ ಚನ್ನಪ್ಪ, ಮುಖಂಡರಾದ ಯಂಕಣ್ಣ ಯರಾಶಿ, ರುದ್ರಪ್ಪ ಮರಕಟ, ಅಪ್ಪಣ್ಣ ಜೋಶಿ, ಕನಕರಾಯ ಮಾರನಾಳ ಇದ್ದರು.  
ಜಿಲ್ಲೆ

ಕ್ಷೇತ್ರದಲ್ಲಿ ಹೊಸ ಕೆರೆಗಳ ನಿರ್ಮಾಣ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಭರವಸೆ

ಯಲಬುರ್ಗಾ: ಕ್ಷೇತ್ರದಲ್ಲಿ ಕೆರೆಗಳನ್ನು ನಿರ್ಮಿಸಿ ಕೃಷ್ಣಾ ನದಿಯಿಂದ ನೀರು ತುಂಬಿಸಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಕೃಷ್ಣಾ ಬಿಸ್ಕೀಂನ ಕೆರೆ ತುಂಬಿಸುವ ಯೋಜನೆಯಡಿ ತಾಲೂಕಿನ ಮುರಡಿ ಗ್ರಾಮದ ಕೆರೆ ತುಂಬಿದ ಹಿನ್ನೆಲೆಯಲ್ಲಿ ಶುಕ್ರವಾರ ಗ್ರಾಮಸ್ಥರು ಹಮ್ಮಿಕೊಂಡಿದ್ದ ಗಂಗಾಪೂಜೆ ನೆರವೇರಿಸಿ ಮಾತನಾಡಿದರು. ಈ ಹಿಂದೆ ನಾನು ಉನ್ನತ ಶಿಕ್ಷಣ ಸಚಿವನಿದ್ದಾಗ ಅವಳಿ ತಾಲೂಕಿನಲ್ಲಿ ಕೆರೆ ತುಂಬಿಸುವ ಯೋಜನೆ ಜಾರಿಗೊಳಿಸಿದ್ದರಿಂದ ಕೆರೆಗಳಿಗೆ ನೀರು ಬರುತ್ತಿದೆ.

ಇದರಿಂದ ರೈತರ ಕೊಳವೆಬಾವಿಗಳ ಅಂತರ್ಜಲ ಮಟ್ಟ ಹೆಚ್ವಳ ಜತೆಗೆ ಜನ-ಜಾನುವಾರುಗಳಿಗೆ ಕುಡಿಯಲು ಉಪಯೋಗವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕ್ಷೇತ್ರದಲ್ಲಿ ಹೊಸಕೆರೆ ನಿರ್ಮಾಣಕ್ಕಾಗಿ ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಈಗಾಗಲೇ 1200 ಎಕರೆ ಭೂಮಿ ಗುರುತಿಸಲಾಗಿದೆ. ಇಂತಹ ಅಭಿವೃದ್ಧಿ ಕಾರ್ಯಗಳಿಗೆ ಜನರು ಹೆಚ್ಚು ಸಹಕಾರ ನೀಡುವುದರಿಂದ ಅನುಕೂಲವಾಗುತ್ತದೆ. ಶೀಘ್ರವೇ ಕೆರೆ ತುಂಬಿಸುವ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದರು.

ಗ್ರಾಪಂ ಅಧ್ಯಕ್ಷ ಯಮನಪ್ಪ ಮಾಳಿ, ಕೆಬಿಜೆಎನ್‌ಎಲ್ ಎಇಇ ಚನ್ನಪ್ಪ, ಮುಖಂಡರಾದ ಯಂಕಣ್ಣ ಯರಾಶಿ, ರುದ್ರಪ್ಪ ಮರಕಟ, ಅಪ್ಪಣ್ಣ ಜೋಶಿ, ಕನಕರಾಯ ಮಾರನಾಳ, ಪ್ರಕಾಶಗೌಡ ಮಾಲಿಪಾಟೀಲ್, ಶಂಕ್ರಗೌಡ ಪೂಜಾರ, ಶಶಿಧರ ಗಡಾದ ಹಾಗೂ ಸ್ಥಳೀಯ ಮುಖಂಡರು ಇದ್ದರು.