ಯಲಬುರ್ಗಾ ತಾಲೂಕಿನ ಬೇವೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಡೆಂೆ ಕಾಯಿಲೆ ನಿಯಂತ್ರಣ ಮತ್ತು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿ.ಪಿ.ಶಿವಾನಂದ ಮಾತನಾಡಿದರು. ಸಿಎಚ್‌ಒ ಈಶಪ್ಪ ರಾಠೋಡ್, ಪ್ರಭಾರ ಮುಖ್ಯಶಿಕ್ಷಕ ಚಂದ್ರಕಲಾ, ಸಮುದಾಯ ಆರೋಗ್ಯಾಧಿಕಾರಿ ಮಂಜುಳಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಮಾ ಇದ್ದರು.  
ಜಿಲ್ಲೆ

ಡೆಂೆ ಲಕ್ಷಣಗಳಿದ್ದರೆ ರಕ್ತ ಪರೀಕ್ಷೆ ಮಾಡಿಸಿ

ಕುರುವತ್ತಿ ಶ್ರೀಕಾಂತಪ್ಪ

ಯಲಬುರ್ಗಾ: ಡೆಂೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರಿಗೂ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿ.ಪಿ.ಶಿವಾನಂದ ಹೇಳಿದರು.

ತಾಲೂಕಿನ ಬೇವೂರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರೋಗ್ಯ ಇಲಾಖೆಯಿಂದ ಬುಧವಾರ ಹಮ್ಮಿಕೊಂಡಿದ್ದ ಡೆಂೆ ಕಾಯಿಲೆ ನಿಯಂತ್ರಣ ಮತ್ತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಳೆಗಾಲ ಪ್ರಾರಂಭವಾದ ಕಾರಣ ಶುದ್ಧ ನೀರಿನಲ್ಲಿ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಮೊಟ್ಟೆ ಇಡುವ ಮೂಲಕ ಸಂತಾನಾಭಿವೃದ್ಧಿ ಮಾಡುತ್ತವೆ. ಮನುಷ್ಯರಿಗೆ ಕಚ್ಚುವುದರಿಂದ ಡೆಂೆ ಕಾಯಿಲೆ ಹರಡುತ್ತದೆ. ತಲೆನೋವು, ವಾಂತಿ, ಕಣ್ಣಿನ ಹಿಂಭಾಗದಲ್ಲಿ ನೋವು, ವಸಡುಗಳಲ್ಲಿ ರಕ್ತಸ್ರಾವದಂತಹ ಲಕ್ಷಣಗಳು ಕಂಡು ಬಂದರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿ, ಡೆಂೆ ಖಚಿತಪಟ್ಟರೆ ಚಿಕಿತ್ಸೆ ಪಡೆಯಬೇಕು. ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷೃ ವಹಿಸಬಾರದು ಎಂದರು.

ಎಲ್ಲರೂ ಮನೆಗಳಲ್ಲಿ ನೀರು ಶೇಖರಿಸುವ ಬ್ಯಾರಲ್, ಸಿಮೆಂಟ್ ತೊಟ್ಟಿ, ಕಲ್ಲಿನ ದೋಣಿ ಇತರ ನೀರು ಸಂಗ್ರಹ ಪರಿಕರಗಳನ್ನು ವಾರದಲ್ಲಿ 2 ಬಾರಿ ಸ್ವಚ್ಛಗೊಳಿಸಬೇಕು. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿದಾಗ ಅವರ ಕೆಲಸಕ್ಕೆ ಸಹಕರಿಸಬೇಕು ಎಂದರು.

ಸಿಎಚ್‌ಒ ಈಶಪ್ಪ ರಾಠೋಡ್, ಪ್ರಭಾರ ಮುಖ್ಯಶಿಕ್ಷಕ ಚಂದ್ರಕಲಾ, ಸಮುದಾಯ ಆರೋಗ್ಯಾಧಿಕಾರಿ ಮಂಜುಳಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಮಾ, ಶಿಕ್ಷಕರಾದ ಪ್ರವೀಣ, ಶ್ರೀಶೈಲ ಬಡಿಗೇರ್, ಮಹಾಂತೇಶ, ಮಹ್ಮದ್ ಜಹೀರ್, ಅಹಮ್ಮದ್‌ಪಾಷಾ, ಕೇಮಪ್ಪ ದೇವರಮನಿ ಇತರರಿದ್ದರು.