ಯಲಬುರ್ಗಾ ತಾಲೂಕು ಶಿರಗುಂಪಿ ಗ್ರಾಮದ ಕರಿಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ನೂತನ ರಥೋತ್ಸವ ಕಾರ್ಯಕ್ರಮಕ್ಕೆ ಕುದರಿಮೋತಿಯ ಮೈಸೂರು ಮಠದ ವಿಜಯ ಮಹಾಂತ ಸ್ವಾಮೀಜಿ ಚಾಲನೆ ನೀಡಿದರು. 
ಜಿಲ್ಲೆ

ಧರ್ಮದ ಕಾರ್ಯಕ್ಕೆ ಕೈ ಜೋಡಿಸಿ - ಶ್ರೀಧರಮುರಡಿ ಹಿರೇಮಠದ ಬಸವಲಿಂಗೆಶ್ವರ ಸ್ವಾಮೀಜಿ ಕರೆ

ಯಲಬುರ್ಗಾ: ಧರ್ಮದ ಕಾರ್ಯಕ್ಕೆ ಕೈಲಾದಷ್ಟು ನೆರವು ನೀಡಬೇಕೆಂದು ಶ್ರೀಧರಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ತಾಲೂಕಿನ ಶಿರಗುಂಪಿ ಗ್ರಾಮದ ಕರಿಬಸವೇಶ್ವರ ದೇವಸ್ಥಾನದ ಆರನೇ ವಾರ್ಷಿಕೋತ್ಸವ ನಿಮಿತ್ತ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ನೂತನ ರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರೂ ಶ್ರದ್ಧೆ ಮತ್ತು ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಮಹಿಳೆಯರು ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡಿ ಒಳ್ಳೆಯ ನಾಗರಿಕರಾಗಲು ಪ್ರೇರಿಪಿಸಬೇಕೆಂದು ಸಲಹೆ ನೀಡಿದರು.

ಕುದರಿಮೋತಿಯ ಮೈಸೂರು ಮಠದ ವಿಜಯ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಐದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದವು.