ಯಲಬುರ್ಗಾ ಕೋವಿಡ್ ಕೇರ್ ಕೇಂದ್ರಕ್ಕೆ ಶಾಸಕ ಹಾಲಪ್ಪ ಆಚಾರ್ ಬುಧವಾರ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. 
ಜಿಲ್ಲೆ

ಸೋಂಕಿಗೆ ಭಯಪಡದೆ ಧೈರ್ಯವಾಗಿರಿ- ಶಾಸಕ ಹಾಲಪ್ಪ ಆಚಾರ್ ಕಿವಿಮಾತು

ಯಲಬುರ್ಗಾ: ಸೋಂಕಿತರು ಯಾವುದೇ ಕಾರಣಕ್ಕೂ ಭಯ ಪಡದೆ ಧೈರ್ಯವಾಗಿರಬೇಕು. ಸಕರಾತ್ಮಕ ವಿಚಾರದಿಂದ ಕರೊನಾ ಗೆಲ್ಲಬಹುದು ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು.

ತಾಲೂಕಿನ ಸಂಗನಹಾಳ ರಸ್ತೆಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಕೇರ್ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕಾಗಿ ಸೋಂಕಿತರನ್ನು ಪತ್ತೆ ಹಚ್ಚಿ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತಿದೆ. ಕೇರ್ ಸೆಂಟರ್‌ಗೆ ದಾಖಲಾಗುವ ಮೂಲಕ ಸೋಂಕಿತರು ಅಧಿಕಾರಿಗಳಿಗೆ ಸಹಕಾರ ನೀಡಬೇಕು. ಕೇಂದ್ರಗಳಲ್ಲಿ ಮೂಲ ಸೌಕರ್ಯ ಸಮಸ್ಯೆಗಳಿದ್ದರೆ ಅಧಿಕಾರಿಗಳ ಗಮನಕ್ಕೆ ತಂದರೆ ಪರಿಹರಿಸುತ್ತಾರೆ. ವೈದ್ಯರು ಸೋಂಕಿತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ತಹಸೀಲ್ದಾರ್ ಶ್ರೀಶೈಲ ತಳವಾರ್ ಮಾತನಾಡಿ, ಸೋಂಕು ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಟಿಎಚ್‌ಒ ಮಂಜುನಾಥ ಬ್ಯಾಲಹುಣಸಿ, ಪಪಂ ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ, ವೈದ್ಯಾಧಿಕಾರಿಗಳು, ಸಿಬ್ಬಂದಿ ಇದ್ದರು.