ಯಲಬುರ್ಗಾ ತಾಲೂಕಿನ ಕೋನಸಾಗರದಲ್ಲಿ ಗುರುವಾರ ಮಳೆ, ಗಾಳಿಗೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ ನೆಲಕ್ಕೆ ಬಿದ್ದಿರುವುದು. 
ಜಿಲ್ಲೆ

ಕೋನಸಾಗರದಲ್ಲಿ ಕುಡಿವ ನೀರಿನ ಸಮಸ್ಯೆ

Koppal

ಯಲಬುರ್ಗಾ: ತಾಲೂಕಿನಲ್ಲಿ ಗುರುವಾರ ಸುರಿದ ಮಳೆ, ಗಾಳಿಯಿಂದ ಕೋನಸಾಗರ ಗ್ರಾಮದಲ್ಲಿ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್‌ಫಾರ್ಮರ್ ನೆಲಕ್ಕುರುಳಿದೆ. ಇದರಿಂದಾಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಿದೆ.

ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್‌ಫಾರ್ಮರ್ ದುರಸ್ತಿಗೆ ಜೆಸ್ಕಾಂ ಸಿಬ್ಬಂದಿ ಮುಂದಾಗಿಲ್ಲ. ಇದರಿಂದಾಗಿ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಕುಡಿವ ನೀರಿನ ಸಮಸ್ಯೆ ಉಂಟಾಗಿದೆ. ತ್ವರಿತ ದುರಸ್ತಿ ಕೈಗೊಂಡು ವಿದ್ಯುತ್ ಹಾಗೂ ಕುಡಿವ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.