ಕೊಪ್ಪಳ: ಯಲಬುರ್ಗಾ ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘ, ಪೋಲಿಸ್ ಇಲಾಖೆ, ಅಭಿಯೋಜನಾ ಇಲಾಖೆ, ತಾಪಂ ಆಶ್ರಯದಲ್ಲಿ ಪೌಷ್ಠಿಕ ಸಪ್ತಾಹ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಅವರು ಪೋಷಣೆಗೆ ಮಹಿಳೆಯರು ಅನುಸರಿಸಬೇಕಾದ ಕ್ರಮಗಳು ಹಾಗೂ ಕಾನೂನಿನ ಸೌಲಭ್ಯಗಳ ಜತೆಗೆ ಕಾಯ್ದೆಗಳ ಬಗ್ಗೆ ವಿವರಿಸಿದರು. ತಾಲೂಕು ವೈದ್ಯಾಧಿಕಾರಿ ಡಾ.ರಚನಾ ಅವರು ಉಪನ್ಯಾಸದಲ್ಲಿ ಗರ್ಭಾವಸ್ಥೆಯಲ್ಲಿನ ತೊಂದರೆಗಳು, ಆಹಾರ ಪದಾರ್ಥಗಳು, ಸೇವಿಸಬೇಕಾದ ಪೋಷಕಾಂಶಗಳ ಕೊರತೆಯಿಂದಯಾಗುವ ಸಮಸ್ಯೆಗಳು, ಗರ್ಭಿಣಿಯರ ಮತ್ತು ಬಾಣಂತಿಯರ ಪೋಷಣೆಯ ಮಾಹಿತಿ ನೀಡಿದರು.
ಇದನ್ನೂ ಓದಿ:
ಸಿಡಿಪಿಒ ಸಿಂಧು ಯಲಿಗಾರ ಮಾತನಾಡಿದರು. ಪಪಂ ಸದಸ್ಯೆ ನಂದಿತಾ ದಾನರೆಡ್ಡಿ, ವಕೀಲ ಸಂಘದ ಕಾರ್ಯದರ್ಶಿ ಈರಣ್ಣ ಕೋಳೂರು ಸೇರಿ ಸಹಾಯಕ ಸರ್ಕಾರಿ ಅಭಿಯೋಜಕರು, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.