ದಮ್ಮೂರಿನಲ್ಲಿ ಪ್ರೌಢಶಾಲೆ ಪ್ರಾರಂಭೋತ್ಸವಕ್ಕೆ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಬುಧವಾರ ಚಾಲನೆ ನೀಡಿದರು. ಶಾಸಕ ಬಸವರಾಜ ರಾಯರಡ್ಡಿ, ಎಸಿ ಕ್ಯಾ.ಮಹೇಶ ಮಾಲಗತ್ತಿ, ಡಿಡಿಪಿಐ ಶ್ರೀಶೈಲ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ಎ.ಜಿ.ಭಾವಿಮನಿ, ವೀರನಗೌಡ ಬಳೂಟಗಿ, ಕೆರಿಬಸಪ್ಪ ನಿಡಗುಂದಿ, ಚಂದ್ರಶೇಖರಯ್ಯ ಭಾನಾಪುರ ಇದ್ದರು.  
ಜಿಲ್ಲೆ

ಶಾಲಾ-ಕಾಲೇಜುಗಳಿಗೆ ಹೆಚ್ಚಿನ ಅನುದಾನ

ಯಲಬುರ್ಗಾ: ಸರ್ಕಾರಿ ಶಾಲೆ-ಕಾಲೇಜು ಹಂತದಲ್ಲಿ 20 ಸಾವಿರ ಮಕ್ಕಳಿಗೆ ನೀಟ್-ಸಿಇಟಿ ತರಬೇತಿ ಪ್ರಾರಂಭಿಸಲು ಕ್ರಿಯಾಯೋಜನೆ ರೂಪಿಸಲಾಗುತ್ತಿದೆ ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ದಮ್ಮೂರು-ಕರಮುಡಿಯಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ ಅನುದಾನದಡಿ ಮಂಜೂರಾದ ಪ್ರೌಢ ಶಾಲೆಗಳ ಪ್ರಾರಂಭೋತ್ಸವಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ ಇಲಾಖೆಗೆ 44 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. 10 ತಿಂಗಳಲ್ಲಿ 12 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. 15-20 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.

ಶಾಲಾ-ಕಾಲೇಜುಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ದಿನವೂ ಶಾಲೆಗೆ ಕಳಿಸಬೇಕು. ಮಕ್ಕಳು ಕೇವಲ ಹಾಜರಾತಿ ಶೋಕಿಗಾಗಿ ಬರೋದಲ್ಲ. ವಿದ್ಯಾಭ್ಯಾಸ ಮಾಡಬೇಕು ಎಂದ ಅವರು, ನಾನು ಒಂದು ಇಲಾಖೆಗೆ ಮಾತ್ರ ಮಂತ್ರಿಯಾಗಿದ್ದೇನೆ. ಆದರೆ ರಾಜ್ಯದ ಖಜಾನೆಯ (ಚೆಕ್) ಕೀಲಿಕೈ ರಾಯರಡ್ಡಿ ಕೈಯಲ್ಲಿದೆ ಎಂದು ಸಚಿವ ಬಂಗಾರಪ್ಪ ಕಿಚಾಯಿಸಿದರು.

ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿ, ಶಾಲಾ-ಕಾಲೇಜು ಕಟ್ಟಡ ನಿರ್ಮಾಕ್ಕೆ ರೈತರು ಭೂಮಿ ದಾನ ಮಾಡಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಶ್ರಮಿಸಬೇಕು. ಮಕ್ಕಳು ಸರ್ಕಾರಿ ಶಾಲೆಗೆ ದಾಖಲಾಗುವ ಮೂಲಕ ಕನ್ನಡ ಕಲಿಯಬೇಕು. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಎಂದರು.

ಎಸಿ ಕ್ಯಾ.ಮಹೇಶ ಮಾಲಗತ್ತಿ, ಡಿಡಿಪಿಐ ಶ್ರೀಶೈಲ ಬಿರಾದಾರ, ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ್ ಪಾಟೀಲ್, ಬಿಇಒ ಕೆ.ಟಿ.ನಿಂಗಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ.ಕಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ಎ.ಜಿ.ಭಾವಿಮನಿ, ವೀರನಗೌಡ ಬಳೂಟಗಿ, ಈರಪ್ಪ ಕುಡಗುಂಟಿ, ಕೆರಿಬಸಪ್ಪ ನಿಡಗುಂದಿ ಇತರರಿದ್ದರು.