ಯಲಬುರ್ಗಾದಲ್ಲಿ ಬೀದಿ ನಾಯಿಗಳಿಗೆ ರೇಬೀಸ್ ಚುಚ್ಚುಮದ್ದು ನೀಡಲಾಯಿತು. ಪಪಂ ಮುಖ್ಯಾಧಿಕಾರಿ ನಾಗೇಶ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಚೂರಿ, ನೌಕರ ಸಂಜಯ ಚಿತ್ರಗಾರ ಇತರರಿದ್ದರು.  
ಜಿಲ್ಲೆ

ಬೀದಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು

ಕುರುವತ್ತಿ ಶ್ರೀಕಾಂತಪ್ಪ

ಯಲಬುರ್ಗಾ: ಪಟ್ಟಣದ ನಿವಾಸಿಗಳಿಗೆ ತೊಂದರೆ ಕೊಡುತ್ತಿದ್ದ ಬೀದಿ ನಾಯಿಗಳಿಗೆ ಪಪಂ ಹಾಗೂ ಪಶು ಇಲಾಖೆ ಸಹಯೋಗದಲ್ಲಿ ಬುಧವಾರ ರೇಬಿಸ್ ಚುಚ್ಚುಮದ್ದು ನೀಡಲಾಯಿತು.

ಪಪಂ ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಅನಾವಶ್ಯಕ ತೊಂದರೆ, ಕಚ್ಚುವುದರ ಕುರಿತು ನಿವಾಸಿಗಳು ಪಪಂಗೆ ಮನವಿ ಮಾಡಿದ್ದರು.

ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ನಿವಾಸಿಗಳ ಹಿತ ರಕ್ಷಣೆಗೆ ಸಲುವಾಗಿ ಮೈಸೂರಿನಿಂದ 6 ಜನ ವಿಶೇಷ ನಾಯಿ ಹಿಡಿಯುವ ತಂಡವನ್ನು ಕರೆಯಿಸಿ ಪಟ್ಟಣದ 250ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹಿಡಿದು ರೇಬಿಸ್ ಚುಚ್ಚುಮದ್ದು ನೀಡಲಾಗಿದೆ. ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಚೂರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು ನೀಡಲಾಗಿದೆ ಎಂದು ತಿಳಿಸಿದರು.