ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕ ದಿನದ ನಿಮಿತ್ತ ಕೇಕ್ ಕತ್ತರಿಸಲಾಯಿತು. ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್, ತಾಂತ್ರಿಕ ಸಂಯೋಜಕ ಸಂತೋಷ್ ನಂದಾಪುರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಪಿಡಿಒ ರತ್ನಮ್ಮ ಗುಂಡಣ್ಣನವರ್, ಬಿಎಫ್‌ಟಿ ಗುರುಬಸಯ್ಯ, ಜಿಕೆಎಂ ಶ್ರುತಿ ಗಾಣಿಗೇರ ಇದ್ದರು.  
ಜಿಲ್ಲೆ

ಬಲಿಷ್ಟ ಭಾರತ ಕಟ್ಟುವಲ್ಲಿ ಕಾರ್ಮಿಕರ ಕೊಡುಗೆ ಅಪಾರ

ಕುರುವತ್ತಿ ಶ್ರೀಕಾಂತಪ್ಪ

ಯಲಬುರ್ಗಾ: ಸದೃಢ ಪ್ರಜಾಪ್ರಭುತ್ವ ಯಶಸ್ವಿಗೆ ಪ್ರತಿಯೊಬ್ಬರೂ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್ ಹೇಳಿದರು.

ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಹಾಗೂ ಕಾರ್ಮಿಕ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೆ.7ರಂದು ಮತದಾನ ನಡೆಯಲಿದ್ದು, ನರೇಗಾ ಕೂಲಿಕಾರರು ಕಡ್ಡಾಯವಾಗಿ ಪಾಲ್ಗೊಂಡು ಹಕ್ಕು ಚಲಾಯಿಸಬೇಕು. ಬಲಿಷ್ಟ ಭಾರತ ಕಟ್ಟುವಲ್ಲಿ ಕಾರ್ಮಿಕರ ಕೊಡುಗೆ ಅಪಾರವಿದೆ. ಹಾಗಾಗಿ ಮೆ.1ರಂದು ಕಾರ್ಮಿಕ ದಿನ ಆಚರಿಸಲಾಗುತ್ತಿದೆ ಎಂದರು.

ನರೇಗಾ ಯೋಜನೆಯಡಿ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಹಮ್ಮಿಕೊಂಡಿದ್ದು, ಇದು ಮೂರು ತಿಂಗಳು ನಡೆಯಲಿದೆ. ಕೂಲಿಕಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕೂಲಿಕಾರರೊಂದಿಗೆ ಅಧಿಕಾರಿಗಳು ಕೇಕ್ ಕತ್ತರಿಸಿ ಕಾರ್ಮಿಕ ದಿನ ಆಚರಿಸಿದರು. ತಾಪಂ ತಾಂತ್ರಿಕ ಸಂಯೋಜಕ ಸಂತೋಷ್ ನಂದಾಪುರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಪಿಡಿಒ ರತ್ನಮ್ಮ ಗುಂಡಣ್ಣನವರ್, ಬಿಎಫ್‌ಟಿ ಗುರುಬಸಯ್ಯ, ಜಿಕೆಎಂ ಶ್ರುತಿ ಗಾಣಿಗೇರ ಹಾಗೂ ಕಾಯಕ ಬಂಧುಗಳು ಇದ್ದರು.