ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಶೂ, ಸಾಕ್ಸ್ ವಿತರಿಸಲಾಯಿತು. ತಾಪಂ ಮಾಜಿ ಸದಸ್ಯ ಶರಣಪ್ಪ ಈಳಿಗೇರ್, ಎಸ್ಡಿಎಂಸಿ ಅಧ್ಯಕ್ಷ ಚಂದಾಲಿಂಗಪ್ಪ ಹಿರೇಮನಿ, ಮುಖ್ಯಶಿಕ್ಷಕ ಹುಚ್ಚೀರಪ್ಪ ಬೆಟಗೇರಿ, ಪ್ರಮುಖರಾದ ಮಾರೆಪ್ಪ, ಮಲ್ಲನಗೌಡ, ಕಳಕನಗೌಡ ಪಾಟೀಲ್, ದೇವಪ್ಪ ಪರಂಗಿ ಇದ್ದರು.  
ಜಿಲ್ಲೆ

ಸರ್ಕಾರದ ಯೋಜನೆ ಸದುಪಯೋಗವಾಗಲಿ

ಕುರುವತ್ತಿ ಶ್ರೀಕಾಂತಪ್ಪ

ಯಲಬುರ್ಗಾ: ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ತಾಪಂ ಮಾಜಿ ಸದಸ್ಯ ಶರಣಪ್ಪ ಈಳಿಗೇರ್ ಹೇಳಿದರು.

ತಾಲೂಕಿನ ತುಮ್ಮರಗುದ್ದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಉಚಿತ ಶೂ, ಸಾಕ್ಸ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಸರ್ಕಾರಗಳು ಶಿಕ್ಷಣ ಇಲಾಖೆ ಮೂಲಕ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕು. ಪಾಲಕರು ಮಕ್ಕಳನ್ನು ನಿತ್ಯ ಶಾಲೆಗೆ ಕಳುಹಿಸುವ ಮೂಲಕ ಶಿಕ್ಷಣವಂತರನ್ನಾಗಿ ಮಾಡಬೇಕು ಎಂದರು.

ಎಸ್ಡಿಎಂಸಿ ಅಧ್ಯಕ್ಷ ಚಂದಾಲಿಂಗಪ್ಪ ಹಿರೇಮನಿ, ಮುಖ್ಯಶಿಕ್ಷಕ ಹುಚ್ಚೀರಪ್ಪ ಬೆಟಗೇರಿ, ಪ್ರಮುಖರಾದ ಮಾರೆಪ್ಪ, ಮಲ್ಲನಗೌಡ, ಕಳಕನಗೌಡ ಪಾಟೀಲ್, ದೇವಪ್ಪ ಪರಂಗಿ, ಎಸ್ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಇದ್ದರು.