ಜಿಲ್ಲೆ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು: ಶಾಸಕ ಎಸ್.ಆರ್. ವಿಶ್ವನಾಥ್

ಬೆಂಗಳೂರು: ಯಲಹಂಕದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದ್ದು, ಇದರ ಫಲವಾಗಿ ಕ್ಷೇತ್ರದಲ್ಲಿನ ಹಲವು ಶಾಲೆಗಳು ಶೈಕ್ಷಣಿಕ ಪ್ರಗತಿ ಮತ್ತು ಮೂಲಸೌಕರ್ಯ ವಿಷಯದಲ್ಲಿ ರಾಜ್ಯದ ಗಮನ ಸೆಳೆದಿವೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ತಿಳಿಸಿದರು.

ದಾಸನಪುರ ಹೋಬಳಿಯ ಕಾಚೋಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ನಿರ್ಮಿಸಲಾಗಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳು ಮೂಲಸೌಕರ್ಯ ಮತ್ತು ಶೈಕ್ಷಣಿಕ ಪ್ರಗತಿಯ ನಿಟ್ಟಿನಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೆ ಬಡವರ ಮಕ್ಕಳಿಗೆ ಹೆಚ್ಚು ಅನುಕೂಲವಾಗುತ್ತದೆ. ಈ ದಿಸೆಯಲ್ಲಿ ಯಲಹಂಕ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ನಾನೂ ಸಹ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವುದರಿಂದ ಸರ್ಕಾರಿ ಶಾಲೆಗಳ ಬಗ್ಗೆ ವಿಶೇಷ ಪ್ರೀತಿ, ತುಡಿತ, ಕಾಳಜಿಯಿದೆ. ಯಲಹಂಕದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಶೈಕ್ಷಣಿಕ ಪ್ರಗತಿ ಮತ್ತು ಮೂಲಸೌಕರ್ಯ ವಿಷಯದಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿರುವುದು ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಬಗ್ಗೆ ನಮಗಿರುವ ಕಾಳಜಿಗೆ ಸಾಕ್ಷಿಯಾಗಿದೆ. ಇಲ್ಲಿನ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ಸಹ ಉತ್ತಮ ಸ್ಥಿತಿಯಲ್ಲಿವೆ. ನೂತನ ಶಾಲೆ ಕಟ್ಟಡ ಉದ್ಘಾಟನೆಗೊಂಡಿದ್ದು, ಸ್ಥಳೀಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾಚೋಹಳ್ಳಿ ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ತಾಪಂ ಮುಖ್ಯಸ್ಥ ಜೋಸ್ೆ, ತಾಪಂ ಮಾಜಿ ಅಧ್ಯಕ್ಷೆ ಅಶೋಕ್ ಜಯಶ್ರೀ, ಜಿಪಂ ಮಾಜಿ ಸದಸ್ಯ ಉಮೇಶ್, ಮುಖಂಡರಾದ ಗಂಗಾಧರಯ್ಯ, ಗಂಗರಾಜು, ನರಸೇಗೌಡ, ಪುಟ್ಟೀರಪ್ಪ, ಉಮೇಶ್ ಇದ್ದರು.