ಜಿಲ್ಲೆ

ನೇಣು ಬಿಗಿದ ಸ್ಥಿತಿಯಲ್ಲಿ ಶವಪತ್ತೆ

reportermys

ಯಳಂದೂರು: ತಾಲೂಕಿನ ಟಿ.ಹೊಸೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.


ಗ್ರಾಮದ ನಂಜೇಗೌಡ (45) ಮೃತರು. ಇವರು ಬಿಆರ್‌ಟಿ ಹುಲಿ ಯೋಜನೆಯ ಅರಣ್ಯ ಪ್ರದೇಶದಲ್ಲಿ ಆನೆ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗ್ರಾಮದ ತಿಪ್ಪೆಕಟ್ಟೆ ರಸ್ತೆಯ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಗ್ರಾಮಸ್ಥರು ಯಳಂದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.