ಜಿಲ್ಲೆ

29ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ

ಕಿರಣ್ ಮಾದರಹಳ್ಳಿ

ಯಳಂದೂರು: ದಿ.ಎಂ.ಎನ್.ನಾಗರಾಜು ಅವರ ಸ್ಮರಣಾರ್ಥ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ, ಸಮರ್ಪಣ ಫೌಂಡೇಷನ್ ಸಹಯೋಗದಲ್ಲಿ ಯಳಂದೂರಿನ ತಾಲೂಕಿನ ಅಗರ ಗ್ರಾಮದಲ್ಲಿ ಸೋಮವಾರ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಚಾಮುಲ್ ಅಧ್ಯಕ್ಷ ನಾಗೇಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 146 ಜನರು ಕಣ್ಣಿನ ತಪಾಸಣೆಗೆ ಒಳಪಟ್ಟರು. ಇದರಲ್ಲಿ 29 ಜನರನ್ನು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ಕಳುಹಿಸಿಕೊಡಲಾಯಿತು. ಗ್ರಾಪಂ ಅಧ್ಯಕ್ಷ ಮುದ್ದನಾಯಕ, ಸದಸ್ಯರಾದ ದೇವರಾಜು, ಸ್ವಾಮಿ ಮುಖಂಡರಾದ ಬೂದಿತಿಟ್ಟು ಶಿವಕುಮಾರ್, ಸನತ್, ನಾಗರಾಜು, ಅಗರ ರಾಜು ಶಂಕರ ಕಣ್ಣಿನ ಆಸ್ಪತ್ರೆಯ ವ್ಯವಸ್ಥಾಪಕ ಶ್ರೀಕಂಠಮೂರ್ತಿ ಸೇರಿದಂತೆ ಇತರರು ಇದ್ದರು.