ಜಿಲ್ಲೆ

ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಕಿರಣ್ ಮಾದರಹಳ್ಳಿ

ಯಳಂದೂರು: ಪಟ್ಟಣದಲ್ಲಿರುವ ಕರ್ನಾಟಕ ಒನ್ ಸೇವಾ ಕೇಂದ್ರ ಹಾಗೂ ತಾಲೂಕಿನ ಮೆಳ್ಳಹಳ್ಳಿ ಗೇಟ್ ಬಳಿ ಇರುವ ಆದರ್ಶ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪನಾಗ್ ಶುಕ್ರವಾರ ಭೇಟಿ ನೀಡಿದ್ದರು.

ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು ಈ ಸಂಬಂಧ ಇಲ್ಲಿಗೆ ಅರ್ಜಿ ಸಲ್ಲಿಸುವ ಮಹಿಳೆಯರೊಂದಿಗೆ ಮಾತುಕತೆ ನಡೆಸಿದರು. ಇಲ್ಲಿ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ತಿಳಿದುಕೊಂಡರು.

ಉಪವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಶಿವರಾಜು, ಶಿರಸ್ತೇದಾರ್ ಶಾಂತಿ, ರಜಸ್ವ ನಿರೀಕ್ಷಕ ಯದುಗಿರಿ, ಸುಹಾಸ್, ನಂದಕುಮಾರ್ ಸೇರಿದಂತೆ ಅನೇಕರು ಇದ್ದರು.