ಯಲಬುರ್ಗಾ: ಪ್ರತಿದಿನ ತಮ್ಮ ಕುಟುಂಬ ಹಾಗೂ ವೈಯಕ್ತಿಕ ಜೀವನವನ್ನು ಬದಿಗೊತ್ತಿ ನೊಂದವರಿಗೆ, ಬಡವರಿಗೆ ನ್ಯಾಯ ಕೊಡಿಸಲು ಶ್ರಮಿಸುತ್ತಿರುವ ವಕೀಲರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಹಿರಿಯ ವಕೀಲ ಬಿ.ಎಂ.ಶಿರೂರ ಸೋಮವಾರ ಹೇಳಿದರು.
ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷ ಸದಾಶಿವ ರೆಡ್ಡಿ ಅವರ ಮೇಲೆ ದುಷ್ಕರ್ಮಿಗಳು ಭೀಕರ ಹಲ್ಲೆ ಮತ್ತು ದಾಳಿ ಮಾಡಿರುವ ಘಟನೆಯನ್ನು ಖಂಡಿಸಿ ಪಟ್ಣಣದಲ್ಲಿ ತೋಳಿಗೆ ಕೆಂಪು ಪಟ್ಟಿ ಧರಿಸಿ ನ್ಯಾಯಾಲಯ ಕಾರ್ಯಕಲಾಪಗಳಿಂದ ದೂರ ಉಳಿದು ಮಾತನಾಡಿದರು.
ಹಲ್ಲೆ ಮಾಡಿದ ಅಪರಾಧಿಗಳ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಬದ್ಧವಾಗಿ ನ್ಯಾಯ ದೊರಕಿಸಿ ಕೊಡಲು ಅನುಕೂಲ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.