ಯಲಬುರ್ಗಾ ಕೃಷಿ ಇಲಾಖೆ ಅಧಿಕಾರಿ ಶಿವಾನಂದ ಮಾಳಗಿಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಜಿಲ್ಲಾ ಘಟಕ ಮನವಿ ಸಲ್ಲಿಸಿತು. ಜೆಡಿಎಸ್ ಜಿಲ್ಲಾ ವಕ್ತಾರ ಮಲ್ಲನಗೌಡ ಕೋನಗೌಡ, ತಾಲೂಕು ಅಧ್ಯಕ್ಷ ಬಸವರಾಜ ಗುಳಗುಳಿ, ಕಾರ್ಯಾಧ್ಯಕ್ಷ ಶರಣಪ್ಪ ರಾಂಪೂರ ಹಾಜರಿದ್ದರು.  
ಜಿಲ್ಲೆ

ರೈತರಿಗೆ ಬಿತ್ತನೆ ಬೀಜ ಒದಗಿಸಿ

ಯಲಬುರ್ಗಾ: ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಒದಗಿಸಲು ಒತ್ತಾಯಿಸಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಜಿಲ್ಲಾ ಘಟಕ ಪಟ್ಟಣದ ಕೃಷಿ ಇಲಾಖೆ ಅಧಿಕಾರಿ ಶಿವಾನಂದ ಮಾಳಗಿಗೆ ಸೋಮವಾರ ಮನವಿ ಸಲ್ಲಿಸಿತು.

ಈಗಾಗಲೇ ಮುಂಗಾರು ಆರಂಭವಾಗಿದೆ. ರೈತರು ಬಿತ್ತನೆಗಾಗಿ ಭೂಮಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಲಾಖೆಯು ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಡಿಎಪಿ ಗೊಬ್ಬರದ ಸಮರ್ಪಕ ಪೂರೈಕೆ ಮಾಡಬೇಕು.

ಹೋಬಳಿ ಕೇಂದ್ರಗಳ ಜತೆಗೆ ಬೇವೂರು ಹಾಗೂ ತಳಕಲ್ ಗ್ರಾಮಗಳಲ್ಲಿ ಎರಡು ಮೂರು ದಿನಗಳ ಒಳಗಡೆ ಬಿತ್ತನೆ ಬೀಜ ವಿತರಿಸುವ ವ್ಯವಸ್ಥೆ ಕಲ್ಪಿಸಬೇಕು. ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು.

ಗೊಬ್ಬರ ಮಾರಾಟಗಾರರು ರೈತರಿಗೆ ಸ್ಟಾಕ್ ಬೋರ್ಡ್ ಹಾಗೂ ದರಪಟ್ಟಿ ಹಾಕುವಂತೆ ತಿಳಿಸಬೇಕು ಎಂದು ಜೆಡಿಎಸ್ ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ್ರ ಒತ್ತಾಯಿಸಿದರು.