ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಯಲಬುರ್ಗಾ ನೂರು ಹಾಸಿಗೆ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಮೂಡಿಸಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಎಸ್.ಪಾಟೀಲ್, ವಕೀಲರ ಸಂಘದ ಉಪಾಧ್ಯಕ್ಷ ಎಂ.ಎಸ್.ನಾಯ್ಕರ್, ಕಾರ್ಯದರ್ಶಿ ಮಹಾಂತೇಶ್ ಈಟಿ, ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆತಯರು, ವಿದ್ಯಾರ್ಥಿಗಳಿದ್ದರು. 
ಜಿಲ್ಲೆ

ದುಶ್ಚಟಗಳಿಂದ ದೂರವಿದ್ದು ಜವಾಬ್ದಾರಿ ನಿಭಾಯಿಸಿ

ಯಲಬುರ್ಗಾ: ಮನುಷ್ಯ ಯಶಸ್ಸು ಸಾಧಿಸಬೇಕಾದರೆ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕು ಎಂದು ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ ಹೇಳಿದರು.

ಆರೋಗ್ಯ ಇಲಾಖೆ, ತಾಲೂಕು ಆಸ್ಪತ್ರೆ, ವಕೀಲರ ಸಂಘಗಳ ಸಹಯೋಗದಲ್ಲಿ ಪಟ್ಟಣದ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಜತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ದುಶ್ಚಟಗಳಿಂದ ದೂರವಿದ್ದು, ತಮ್ಮ ಕುಟುಂಬದ ಜವಾಬ್ದಾರಿ ನಿಭಾಯಿಸಬೇಕು ಎಂದು ಕಿವಿಮಾತು ಹೇಳಿದರು.

ತಾಲೂಕು ವೈದ್ಯಾಧಿಕಾರಿ ನೇತ್ರಾವತಿ ಹಿರೇಮಠ ಮಾತನಾಡಿ, ಪ್ರತಿವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಡಬ್ಲುೃಎಚ್‌ಒ ಆಶ್ರಯದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಹಲವು ಅಂಶಗಳನ್ನು ಬಹಿರಂಗಪಡಿಸಿ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಇದರಿಂದ ದೂರ ಇದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಅಪರ ಸರ್ಕಾರಿ ವಕೀಲ ಮಲ್ಲನಗೌಡ ಎಸ್.ಪಾಟೀಲ್, ವಕೀಲರ ಸಂಘದ ಉಪಾಧ್ಯಕ್ಷ ಎಂ.ಎಸ್.ನಾಯ್ಕರ್, ಕಾರ್ಯದರ್ಶಿ ಮಹಾಂತೇಶ್ ಈಟಿ, ಜಂಟಿ ಕಾರ್ಯದರ್ಶಿ ಹಸನ್‌ಸಾಬ್ ನದಾಫ್, ಪ್ರಮುಖರಾದ ಕೆ.ಆರ್. ಬೆಟಿಗೇರಿ, ಗವಿಸಿದ್ದಪ್ಪ ಮಾನಶೆಟ್ಟರ್, ಡಾ.ಮಾರುತಿ, ಡಾ.ಶೇಖರ್ ಭಜಂತ್ರಿ, ಗವಿಸಿದ್ದೇಶ್ವರ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಆಶಾ ಕಾರ್ಯಕರ್ತೆಯರು ಇದ್ದರು.