ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕಡೂರು ತಾಲೂಕಿನ ಯಳ್ಳಂಬಳಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು. 
ಜಿಲ್ಲೆ

ಯಳ್ಳಂಬಳಸೆ ಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಕಡೂರು: ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಯಳ್ಳಂಬಳಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ವಿವಿಧ ವಿಭಾಗಗಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ಮತ್ತು ಬಾಲಕರ ಎರಡು ತಂಡ ವಿಭಾಗದಲ್ಲಿನ ಖೋಖೋ ಪಂದ್ಯಗಳಲ್ಲಿ (ಪ್ರಥಮ), ಬಾಲಕಿಯರ ವಿಭಾಗ 600 ಮೀ ಓಟ (ಪ್ರಥಮ), 4*100ಮೀ ಓಟ ಬಾಲಕಿಯರ (ಪ್ರಥಮ), ಗುಂಡು ಎಸೆತ ಹಾಗೂ ಉದ್ದ ಜಿಗಿತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯಶಿಕ್ಷಕ ಕಲ್ಲೇಶಪ್ಪ ತಿಳಿಸಿದ್ದಾರೆ. ದೈಹಿಕ ಶಿಕ್ಷಕ ಪಾಂಡುಕುಮಾರ್ ಇದ್ದರು.